ಕೇಂದ್ರ ಬಜೆಟ್ 2024: ಸಮಾಜದ ಪ್ರತಿಯೊಬ್ಬರ ಉಜ್ವಲ ಭವಿಷ್ಯಕ್ಕೆ ನೆರವಾಗಲಿದೆ-ಪ್ರಧಾನಿ ಮೋದಿ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜು.23ರಂದು ಮಂಡಿಸಿದ ಬಜೆಟ್ ದೂರದೃಷ್ಟಿಯುಳ್ಳದ್ದಾಗಿದ್ದು ಸಮಾಜದ ಪ್ರತಿಯೊಬ್ಬರ ಉಜ್ವಲ ಭವಿಷ್ಯಕ್ಕೆ ನೆರವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಬಜೆಟ್ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಬಜೆಟ್ ಯುವ ಜನಾಂಗ, ಮಧ್ಯಮವರ್ಗ , ಮಹಿಳೆಯರು, ಮೂಲಭೂತ ಸೌಕರ್ಯ, ಉತ್ಪಾದಕ ವಲಯದ ಮೇಲೆ ಆಳವಾದ ಗುರಿ ಹೊಂದಿದೆ’
ಉದ್ಯೋಗಕ್ಕೆ ಸಂಬಂಧಿಸಿದ ಯೋಜನೆಗಳು ಕೋಟ್ಯಂತರ ಉದ್ಯೋಗಗಳನ್ನು ಸೃಷ್ಟಿಸಲಿವೆ. ಇದು ದೇಶದ ಅಭಿವೃದ್ಧಿಗೆ ಹೊಸ ದಾರಿ ತೋರಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.