ಟ್ರಂಪ್ ಹತ್ಯೆ ಯತ್ನ ಪ್ರಕರಣ: ಸೀಕ್ರೆಟ್ ಸರ್ವೀಸ್ ಡೈರೆಕ್ಟರ್ ಕಿಂಬರ್ಲಿ ರಾಜೀನಾಮೆ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆ ಯತ್ನವನ್ನು ತಡೆಯುವ ಕಾರ್ಯಾಚರಣೆಯಲ್ಲಿ ತನ್ನ ಸಂಸ್ಥೆ ವಿಫಲವಾಗಿದೆ ಎಂದು ಒಪ್ಪಿಕೊಂಡ ಒಂದು ದಿನದ ಬಳಿಕ ಯುಎಸ್ ಸೀಕ್ರೆಟ್ ಸರ್ವೀಸ್ ಡೈರೆಕ್ಟರ್ ಕಿಂಬರ್ಲಿ ಚೀಟಲ್ ಜು.23ರಂದು ರಾಜೀನಾಮೆ ನೀಡಿದ್ದಾರೆ.
ಜುಲೈ 13 ರಂದು ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ 20 ವರ್ಷದ ಬಂದೂಕುಧಾರಿ ಟ್ರಂಪ್ ಅವರ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ ನಂತರ ಚೀಟಲ್ ರಾಜೀನಾಮೆ ನೀಡಬೇಕು ಎಂದು ರಾಜಕೀಯ ಪಕ್ಷಗಳು ಒತ್ತಾಯಿಸುತ್ತಿದ್ದವು.