ಕ್ರೈಂರಾಜ್ಯ

ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ  ಯುವತಿಯ ಬರ್ಬರ ಹತ್ಯೆ



ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ ಯುವಕನೋರ್ವ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಕೋರಮಂಗಲದ ವಿಆರ್ ಲೇಔಟ್‌ನಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿದ್ದಾರೆ.

24 ವರ್ಷದ ಕೃತಿ ಕುಮಾರಿ ಕೊಲೆಯಾದ ಯುವತಿ. ಈಕೆ ಬಿಹಾರ ಮೂಲದವಳಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ರಾತ್ರಿ ಅಂದಾಜು 11 ಗಂಟೆ ವೇಳೆಗೆ ಯುವಕ ಚಾಕು ಸಮೇತ ಪಿಜಿಯೊಳಗೆ ಬಂದಿದ್ದಾನೆ. ಮೂರನೇ ಮಹಡಿಯಲ್ಲಿರುವ ರೂಂ ಬಳಿ ಚಾಕುವಿನಿಂದ ಹಲ್ಲೆ ನಡೆಸಿದ್ದು, ಬಳಿಕ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!