ಕರಾವಳಿರಾಷ್ಟ್ರೀಯ

ಮಂಗಳೂರು-ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಲು ದ.ಕ ಸಂಸದ ಬ್ರಿಜೇಶ್ ಚೌಟ ಆಗ್ರಹ



ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ರೈಲು ಓಡಾಟದ ವಿಚಾರದಲ್ಲಿ ದ್ವನಿ ಎತ್ತಿದ್ದಾರೆ. ಮಂಗಳೂರು- ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಬೇಕೆಂದು ಅವರು ರೈಲ್ವೇ ಸಚಿವರನ್ನು ಆಗ್ರಹಿಸಿದ್ದಾರೆ.

ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲು ಸಂಚಾರ ನಿಲ್ಲಿಸಲಾಗಿತ್ತು. ನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದ ವರೆಗೆ ವಿಸ್ತರಣೆ ಮಾಡಬೇಕು ಎಂದು ಅವರು ಹೇಳಿದರು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ.
ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯೊಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ. ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಬ್ರಿಜೇಶ್ ಚೌಟ ಅವರ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!