ರಾಜ್ಯ

ಮೂಡಾ ಹಗರಣ: ಸಿದ್ದರಾಮಯ್ಯರನ್ನು ಭ್ರಷ್ಟ ಎನ್ನಲು ಸಾಧ್ಯವಿಲ್ಲ: ಪ್ರತಾಪ್ ಸಿಂಹ





ಸಿದ್ದರಾಮಯ್ಯರ 40 ವರ್ಷದ ರಾಜಕಾರಣವನ್ನು ಗಮನಿಸಿದರೆ ಅವರನ್ನು ಭ್ರಷ್ಟ ಅನ್ನಲು ಸಾಧ್ಯವಿಲ್ಲ. ಆದರೆ, ಈಗ ಸಿದ್ದರಾಮಯ್ಯ ಬಗ್ಗೆ ಅನುಮಾನ ಶುರುವಾಗಿದೆ. ಸೈಟ್ ವಾಪಾಸ್ ಕೊಟ್ಟು ತನಿಖೆ ಮಾಡಿಸುವುದೇ ಸೂಕ್ತ. ಇಲ್ಲದೇ ಇದ್ದರೆ ಸಿಎಂ‌ ಕುಟುಂಬದ ಕೇಸ್ ಇಟ್ಟುಕೊಂಡು ಹಲವರು ಬಚಾವ್ ಆಗುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ, ನಿಮಗೆ ಬಂದಿರುವ ನಿವೇಶನವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಾಪಾಸ್ ಕೊಟ್ಟು ತನಿಖೆ ಮಾಡಿಸಿ’ ಎಂದು ಮೈಸೂರು ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

40 ವರ್ಷಗಳಲ್ಲಿ ಕಳಂಕ ಅಂಟಿಸಿಕೊಳ್ಳದಿರುವ ನೀವು ಇದ್ಯಾವುದೋ 16 ಸೈಟಿಗೆ ಕಳಂಕ ಅಂಟಿಸಿಕೊಳ್ಳುತ್ತಾ ಇದ್ದೀರಿ. ಇದು ಬೇಕಾ ನಿಮಗೆ? ಮುಂದಿನ ಮೂರವರೆ ವರ್ಷ ನೀವೇ ಸಿಎಂ ಆಗಿ ಇರುತ್ತೀರಿ. ಇಡೀ ಮೂರೂವರೆ ವರ್ಷ ಇದೇ ಆರೋಪಕ್ಕೆ ತುತ್ತಾಗುತ್ತೀರಿ. ಈ ಹಿಂದೆ ಸಿಎಂ ಆಗಿದ್ದವರ ಆಸ್ತಿಗಳನ್ನೆಲ್ಲ ನೋಡಿದರೆ ಸಿದ್ದರಾಮಯ್ಯ ಆಸ್ತಿ ಏನೂ ಅಲ್ಲ. ಮುಡಾ ಹಗರಣವನ್ನು ಸಂತೋಷ್ ಹೆಗ್ಡೆ, ಎನ್ ಕುಮಾರ್ ಅವರಂಥ ವ್ಯಕ್ತಿಗಳಿಂದ ನ್ಯಾಯಾಂಗ ತನಿಖೆ ಮಾಡಿಸಿ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!