ಕರಾವಳಿಕ್ರೈಂ

ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಗಾಂಜಾ, ಡ್ರಗ್ಸ್, ಮೊಬೈಲ್ ಫೋನ್ ಪತ್ತೆ

ಮಂಗಳೂರು: ಮಂಗಳೂರು ಜೈಲಿಗೆ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಗಾಂಜಾ, ಡ್ರಗ್ಸ್, ಮೊಬೈಲ್ ಫೋನ್, ಡಿವೈಸ್ ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

ದಾಳಿ ವೇಳೆ ಹಲವು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಸಿಕ್ಕಿದ್ದು ಪೊಲೀಸರು ಆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಜೈಲು ಖೈದಿಗಳ ಜೊತೆಗಿದ್ದ ಗಾಂಜಾ ಮತ್ತು ಡ್ರಗ್ಸ್ ಪ್ಯಾಕೇಟ್ಗಳನ್ನು ಕೂಡಾ ವಶಕ್ಕೆ ಪಡೆಯಲಾಗಿದೆ. ಮುಂಜಾನೆ ಜೈಲಿನ ಮೇಲೆ ಏಕಕಾಲದಲ್ಲಿ ನೂರೈವತ್ತಕ್ಕೂ ಅಧಿಕ ಪೊಲೀಸರು ದಾಳಿ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!