ಗೃಹ ಲಕ್ಷ್ಮೀ ಯೋಜನೆ: ಗುಡ್ ನ್ಯೂಸ್ ನೀಡಿದ ಸಚಿವೆ
ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ ಪಾವತಿ ಮಾಡುವುದು ತಾಂತ್ರಿಕ ದೋಷದಿಂದ ತಡವಾಗಿದ್ದು ಈಗಾಗಲೇ ಹಣವನ್ನು ಡಿಪಿಟಿಗೆ ಫುಶ್ ಮಾಡಿದ್ದೇವೆ. 10 ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಜಾರಿಗೆ ತಂದಿರುವ ಈ ಯೋಜನೆಯನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ನೀಡಲಾಗುತ್ತಿದೆ. ಚುನಾವಣೆಗೆ ಮೊದಲೇ ರಾಜ್ಯದ ಮಹಿಳೆಯರಿಗೆ ಈ ಭರವಸೆ ನೀಡಲಾಗಿತ್ತು. ಹಾಗಾಗಿ ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆ ನಿಲ್ಲುವುದಿಲ್ಲ ಎಂದ ಅವರು ಮೇ ತಿಂಗಳ ಬಳಿಕ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ಬಂದಿಲ್ಲ. ಈ ಬಗ್ಗೆ ಗೊಂದಲ ಬೇಡ, 2 ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಅವರು ತಿಳಿಸಿದ್ದಾರೆ.