ಕರ್ನಾಟಕದ ಬಿಜೆಪಿ ಸಂಸದರಿಂದ ದೆಹಲಿಯಲ್ಲಿ ಪ್ರತಿಭಟನೆ
ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮತ್ತು ವಾಲ್ಮೀಕಿ ಅಭಿವೃದ್ಧಿ ಹಗರಣವನ್ನು ವಿರೋಧಿಸಿ ಕರ್ನಾಟಕದ ಬಿಜೆಪಿ ಸದಸ್ಯರು ಜುಲೈ 26ರಂದು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಕಾಂಗ್ರೆಸ್ ಕೋಟಿ ಲೂಟಿ ಮಾಡಿದ್ದು ದಲಿತರ ಹಣ ಲೂಟಿ ಆಗುತ್ತಿರುವಾಗ ರಾಹುಲ್ ಗಾಂಧಿ ಏನು ಮಾಡುತ್ತಿದ್ದರು ಅಂತಹ ಲೂಟಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಗೆ ಧೈರ್ಯವಿದ್ದರೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಿ ಎಂದು ಸವಾಲೆಸೆದರು.