ಮುಕ್ರಂಪಾಡಿ: ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ
ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಬೃಹತ್ ಗಾತ್ರದ ಮರವೊಂದು ಹೆದ್ದಾರಿಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯುಂಟಾದ ಘಟನೆ ಜು.26ರಂದು ನಡೆದಿದೆ.

ಮುಕ್ರಂಪಾಡಿ ಬಳಿಯ ಮೊಟ್ಟತ್ತಡ್ಕ ತಿರುವಿನಲ್ಲಿ ಮರ ಬಿದ್ದಿದ್ದು ಪರಿಣಾಮ ವಾಹನಗಳ ಸಂಚಾರಕ್ಕೆ ತೊಡಕುಂಟಾಗಿತ್ತು. ಸುಮಾರು ಅರ್ದ ಗಂಟೆ ವಾಹನಗಳ ಸಂಚಾರಕ್ಕೆ ತೊಡಕುಂಟಾಗಿತ್ತು ಎಂದು ತಿಳಿದು ಬಂದಿದೆ.