ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ
ಬೆಂಗಳೂರು: ನಗರದಲ್ಲಿ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಳಿಕ ನಡೆದ ಬೆಳವಣಿಗೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದು ಆರೋಪಿಗೆ ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ಕಾಟನ್ ಪೇಟೆ ಪೊಲೀಸರು ಪುನೀತ್ ಬಂಧಿಸಿದ್ದರು. ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ವೇಳೆ ನ್ಯಾಯಾಧೀಶರು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಬಳಿಕ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು ಸೋಮವಾರ ವಿಚಾರಣೆಗೆ ಬರಲಿದೆ ಎಂದು ತಿಳಿದು ಬಂದಿದೆ.