ಶಿರೂರು ಗುಡ್ಡ ಕುಸಿತ: ಕಾರ್ಯಾಚರಣೆ ಮುಂದುವರಿಸಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮನವಿ
ಕೇರಳ: ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸದೆ ಮುಂದುವರಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು ಲಾರಿ ಚಾಲಕ ಅರ್ಜುನ್ ಸಿಗುವವರೆಗೆ ಶೋಧ ಮುಂದುವರಿಸಬೇಕು. ಅದರಲ್ಲಿ ಸಕಾರಾತ್ಮಕ ಫಲಿತಾಂಶ ದೊರೆಯುವವರೆಗೂ ಸ್ಥಗಿತಗೊಳಿಸಬಾರದು, ಕಾರ್ಯಾಚರಣೆಗೆ ಅಗತ್ಯವಾಗಿರುವ ಆಧುನಿಕ ಉಪಕರಣಗಳನ್ನು ಬಳಸಿಕೊಳ್ಳುವಂತೆ ಅವರು ಸಲಹೆ ನೀಡಿದ್ದಾರೆ. ಇದುವರೆಗೆ ಕೈಗೊಂಡಿರುವ ಕಾರ್ಯಾಚರಣೆ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದ್ದಾರೆ.