ಕೇರಳ: ವಯನಾಡ್ ನಲ್ಲಿ ಭೂ ಕುಸಿತ: ನೂರಾರು ಮಂದಿ ಸಿಲುಕಿರುವ ಶಂಕೆ
ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಪ್ರಾಕೃತಿಕ ವಿಕೋಪ ಸಂಭವಿಸಿದೆ. ಭೂ ಕುಸಿತದಿಂದ ಕೆಲವರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದ್ದು 100ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ.
ಎನ್‌ಡಿಆರ್‌ಎಫ್‌ನ ಹೆಚ್ಚುವರಿ ತಂಡ ವಯನಾಡ್‌ಗೆ ತೆರಳುತ್ತಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ವಯನಾಡ್‌ಗೆ ತೆರಳಲು ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.