ವಯನಾಡು: ಮಹಾದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇನ್ನಷ್ಟು ಹೆಚ್ಚಳ
ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 100 ದಾಟಿದೆ ಎಂದು ವರದಿಯಾಗಿದ್ದು ಹಲವು ಕುಟುಂಬಗಳು ಜಲಸಮಾಧಿಯಾಗಿವೆ.

ಕನಿಷ್ಠ 400ಕ್ಕೂ ಹೆಚ್ಚು ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎಂದು ಎನ್ನಲಾಗುತ್ತಿದೆ. ನಸುಕಿನ ಜಾವ ಭೂಕುಸಿತ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿದ್ದು ನಾಪತ್ತೆಯಾಗಿದೆ.
ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ.
ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದೆ. ಎನ್ಡಿಆರ್ಎಫ್, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.