ಪುತ್ತೂರು: ಶಿರಾಡಿ ಘಾಟಿನ ಮಾರೇನಹಳ್ಳಿಯಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದೆ.
ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿರುವ ಶಿರಾಡಿ ಘಾಟ್ ರಸ್ತೆ, ಇದೀಗ ಮತ್ತೆ ಭೂಕುಸಿತಕ್ಕೆ ಒಳಗಾಗಿದೆ. ಮಾರೇನಹಳ್ಳಿಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದಾಗಿ ಹಲವು ವಾಹನಗಳು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.