ಕರಾವಳಿಯಲ್ಲಿ ಮಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ
ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಒಳನಾಡು ಸೇರಿದಂತೆ ಅನೇಕ ಕಡೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕಳೆದ ಮೂರು ವಾರಗಳಿಂದ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದ್ದು ಅನೇಕ ಅನಾಹುತಗಳನ್ನು ಸೃಷ್ಟಿಸುತ್ತಿದೆ. ಪ್ರಾಣ ಹಾನಿ ಕೂಡಾ ಸಂಭವಿಸಿದೆ.