ಕಡಬ: ಐತ್ತೂರು ಸಮೀಪದ ತೋಡಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಕಡಬ: ತಾಲೂಕಿನ ಐತ್ತೂರು ಗ್ರಾಮದ ಅರ್ಬಿತ್ತೋಡಿ ತೋಡಿನಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ.
ಮೃತಪಟ್ಟವರನ್ನು ರಮೇಶ್ (44.ವ) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಕಡಬ ಪೊಲೀಸರು ಹಾಗೂ ಐತ್ತೂರು ಗ್ರಾ.ಪಂ ಅಧ್ಯಕ್ಷರು, ಪಿಡಿಓ ಭೇಟಿ ನೀಡಿದ್ದಾರೆ. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.