ವಯನಾಡಿನಲ್ಲಿ ಕಾಂಗ್ರೆಸ್’ನಿಂದ 100ಕ್ಕೂ ಹೆಚ್ಚು ಮನೆಗಳ ನಿರ್ಮಾಣ: ರಾಹುಲ್ ಗಾಂಧಿ
ಪ್ರವಾಹ ಪೀಡಿತ ವಯನಾಡಿನಲ್ಲಿ ಕಾಂಗ್ರೆಸ್ ನಿಂದ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗುವುದು ಎಂದು ಸಂಸದ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ವಯನಾಡಿಗೆ ಆಗಮಿಸಿದ ರಾಹುಲ್ ಗಾಂಧಿ, ಭೂಕುಸಿತದಿಂದ ಉಂಟಾದ ವಿನಾಶದ ಪ್ರಮಾಣವನ್ನು ನೋಡಿ “ರಾಷ್ಟ್ರೀಯ ವಿಪತ್ತು” ಎಂದು ಕರೆದರು. ಅಲ್ಲದೇ, ಇದನ್ನು ಎದುರಿಸಲು ತುರ್ತು ಸಮಗ್ರ ಕ್ರಿಯಾ ಯೋಜನೆಗೆ ಒತ್ತಾಯಿಸಿದರು.
ಭೂ ಕುಸಿತದಿಂದ ಮೃತಪಟ್ಟವರ ಸಂಖ್ಯೆ, ನಾಶವಾದ ಮನೆಗಳು ಮತ್ತು ನಾಪತ್ತೆಯಾದವರನ್ನು ಹುಡುಕಲು ಮತ್ತು ರಕ್ಷಿಸಲು ಅನುಸರಿಸುತ್ತಿರುವ ಕಾರ್ಯತಂತ್ರಗಳ ಬಗ್ಗೆ ಅಧಿಕಾರಿಗಳು ರಾಹುಲ್ ಗಾಂಧಿಗೆ ವಿವರಿಸಿದ್ದಾರೆ.