ಬಿಜೆಪಿ-ಜೆಡಿಎಸ್ ಪಾದಯಾತ್ರೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ 7 ದಿನಗಳ ಪಾದಯಾತ್ರೆ ಬೆಂಗಳೂರಿನಿಂದ ಮೈಸೂರಿಗೆ ಆ.3ರಂದು ಪ್ರಾರಂಭಗೊಳ್ಳಲಿದೆ. ಸದನದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮೂಲೆಗುಂಪು ಮಾಡುವುದರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಯಶಸ್ವಿಯಾಗಿದ್ದು, ಸದನದ ಹೊರಗೂ ಸರ್ಕಾರವನ್ನು ಮೂಲೆಗುಂಪು ಮಾಡುವ ಕಾಲ ಸನ್ನಿಹಿತವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.