ವಯನಾಡು: ಅರಣ್ಯ ಪ್ರದೇಶದಲ್ಲಿ ಅನ್ನ ಆಹಾರವಿಲ್ಲದೆ ಕಂಗಾಲಾಗಿದ್ದ ಕುಟುಂಬದ ರಕ್ಷಣೆ
ವಯನಾಡಿನ ಅರಣ್ಯ ಪ್ರದೇಶದಲ್ಲಿ ಅನ್ನ ಆಹಾರವಿಲ್ಲದೆ ಅಲೆದಾಡುತ್ತಿದ್ದ ಬುಡಕಟ್ಟು ಕುಟುಂಬಕ್ಕೆ ಸೇರಿದ ತಾಯಿ ಮತ್ತು ನಾಲ್ಕು ವರ್ಷದ ಮಗನನ್ನು ಅರಣ್ಯಾಧಿಕಾರಿಗಳ ತಂಡ ಪತ್ತೆಹಚ್ಚಿದೆ.
ಈ ವೇಳೆ ವಿಚಾರಣೆ ನಡೆಸಿದ ವೇಳೆ ನಿರ್ಜನ ಗುಹೆಯಲ್ಲಿ ಇನ್ನೂ ಮೂವರು ಮಕ್ಕಳು ಸೇರಿ ನಾಲ್ಕು ಮಂದಿ ಇರುವ ಬಗ್ಗೆ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿ ಗುಹೆಯಿಂದ ನಾಲ್ವರನ್ನು ರಕ್ಷಣೆ ಮಾಡಿ ಅವರಿಗೆ ಬೇಕಾದ ಆಹಾರ, ಬಟ್ಟೆ, ಅಗತ್ಯ ವಸ್ತುಗಳನ್ನು ನೀಡಿ ಸುರಕ್ಷಿತ ಪ್ರದೇಶಕ್ಕೆ ಕರೆತರಲಾಯಿತು ಎಂದು ಕಲ್ಪೆಟ್ಟಾ ವಲಯ ಅರಣ್ಯಾಧಿಕಾರಿ ಕೆ.ಹಶಿಸ್ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳ ಕಾರ್ಯಾಚರಣೆಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.