ಮೈಸೂರು ಚಲೋ ಪಾದಯಾತ್ರೆ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಶಕ್ತಿಯನ್ನು ಹೊಂದಿದೆ: ಬಿ.ವೈ.ವಿಜಯೇಂದ್ರ
ಮೈಸೂರು ಚಲೋ ಪಾದಯಾತ್ರೆಯು ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಶಕ್ತಿಯನ್ನು ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ರಾಜ್ಯದ ಜನತೆಗೆ ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಅಹಿಂದ ವರ್ಗದವರಿಗೆ ಸಾಮಾಜಿಕ ನ್ಯಾಯ ಕೊಡುವುದಾಗಿ ಹೇಳಿದ್ದ ಸಿದ್ದರಾಮಯ್ಯನವರ ಸರ್ಕಾರ ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಲೂಟಿ ಮಾಡಿದೆ. ಮೈಸೂರಿನ ಮುಡಾದ ಅವ್ಯವಹಾರದಡಿ ಬಡವರಿಗೆ ನಿವೇಶನಗಳನ್ನು ವಂಚಿಸಿದ್ದಾರೆ. 5 ಸಾವಿರ ಕೋಟಿಯ ಹಗರಣ ಅಲ್ಲಿ ನಡೆದಿದೆ. ಭ್ರಷ್ಟ ಅಧಿಕಾರಿಗಳಿಗೆ ಸ್ವತಃ ಮುಖ್ಯಮಂತ್ರಿಗಳೇ ಬೆಂಬಲ, ರಕ್ಷಣೆ ಕೊಡುತ್ತಿದ್ದಾರೆ ಎಂದು ಅವರು ಟೀಕಾ ಪ್ರಹಾರ ನಡೆಸಿದರು.