ಬಾಂಗ್ಲಾದಲ್ಲಿ ಭಾರೀ ಘರ್ಷಣೆ: ಕನಿಷ್ಠ 32 ಜನರು ಸಾವು
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳ ಚಳವಳಿ ಘೋಷಿಸಿದ ಅಸಹಕಾರ ಚಳವಳಿಯ ಮೊದಲ ದಿನವೇ ಆಗಸ್ಟ್ 4ರಂದು ಬಾಂಗ್ಲಾದೇಶದಲ್ಲಿ ಪ್ರತಿಭಟನಾಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರ ನಡುವಿನ ಹಿಂಸಾತ್ಮಕ ಘರ್ಷಣೆ ನಡೆದಿದ್ದು ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ.
ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಅಸಹಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರು ಅವಾಮಿ ಲೀಗ್, ಛಾತ್ರ ಲೀಗ್ ಮತ್ತು ಜುಬೋ ಲೀಗ್ ಕಾರ್ಯಕರ್ತರಿಂದ ವಿರೋಧವನ್ನು ಎದುರಿಸಿದಾಗ ಭಾರೀ ಘರ್ಷಣೆ ನಡೆದಿದೆ.
”ಬಾಂಗ್ಲಾದೇಶದಾದ್ಯಂತ 13 ಜಿಲ್ಲೆಗಳಲ್ಲಿ ನಡೆದ ಘರ್ಷಣೆಗಳಲ್ಲಿ 32 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಆ.4ರಿಂದ ಸಂಜೆ 6 ಗಂಟೆಯಿಂದ ದೇಶಾದ್ಯಂತ ಅನಿರ್ದಿಷ್ಟಾವಧಿ ಕರ್ಫ್ಯೂ ಹೇರಿದ್ದು ಫೇಸ್‌ಬುಕ್, ಮೆಸೆಂಜರ್, ವಾಟ್ಸಾಪ್ ಮತ್ತು ಇನ್‌ಸ್ಟಾಗ್ರಾಮ್ ಅನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದೆ ಎಂದು ವರದಿಯಾಗಿದೆ.