ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಅವಘಡ: ಮಹಿಳೆಯರಿಬ್ಬರ ಸಾವು
ದೇವಸ್ಥಾನ ಸ್ವಚ್ಛಗೊಳಿಸುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರು ದಾರುಣ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ನಡೆದಿದೆ. ಕಲಾವತಿ ಬೀದರವಾಡಿ(37ವ), ಸವಿತಾ (36ವ) ಮೃತರು. ದೇವಸ್ಥಾನ ಸ್ವಚ್ಛಗೊಳಿಸಿ ಶೆಟರ್ ಎಳೆಯುವಾಗ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಮೃತ ಕಲಾವತಿ ಪತಿ ಮಾರುತಿ ಬೀದರವಾಡಿಗೆ ಗಂಭೀರ ಗಾಯಗಳಾಗಿದ್ದು, ಬೆಳಗಾವಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.