ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಬರುತ್ತೆ? ಡಿಕೆಶಿ ಏನಂದ್ರು
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಸರ್ಕಾರ ಪ್ರತಿ ತಿಂಗಳಿಗೆ ಮನೆಯ ಯಜಮಾನಿ ಖಾತೆಗೆ 2 ಸಾವಿರ ರೂ. ಜಮೆ ಮಾಡುತ್ತಿದೆ. ಜೂನ್ ಮತ್ತು ಜುಲೈ ತಿಂಗಳ ಹಣ ಜಮಾವಣೆಗೊಂಡಿಲ್ಲ. ಈ ಎರಡು ತಿಂಗಳ ಹಣ ಜಮಾವಣೆ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಮದ್ದೂರಿನಲ್ಲಿ ನಡೆದ ಜನಾಂದೋಲನ ಸಭೆಯಲ್ಲಿ ಡಿಕೆ ಶಿವಕುಮಾರ್ ಭಾಷಣ ಮಾಡುತ್ತಿದ್ದ ವೇಳೆ, ಗೃಹಲಕ್ಷ್ಮಿ ಯೋಜನೆಯ ಕಳೆದ ಒಂದು, ಎರಡು ತಿಂಗಳ ಹಣ ಮಾತ್ರ ನಿಮ್ಮ ಖಾತೆ ಜಮೆ ಆಗಿಲ್ಲ. ಅನುದಾನ ಬಿಡುಗಡೆಯಾಗಿದೆ. ಶ್ರೀಘವೇ ನಿಮ್ಮ ಖಾತೆಗೆ ಹಣ ಜಮೆಯಾಗಲಿದೆ ಎಂದರು. ಹಾಗಾಗಿ ಆಗಸ್ಟ್ ತಿಂಗಳಲ್ಲೇ ಹಣ ಖಾತೆಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ.