ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್ ನ್ಯೂಸ್
ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ. ಹೆಬ್ಬಾಳ್ಕರ್ ಅವರ ಒಂದು ಹೇಳಿಕೆ ಗೃಹಲಕ್ಷ್ಮೀ ಫಲಾನುಭವಿಗಳ ಮುಖದಲ್ಲಿ ಸಂತಸ ಮೂಡಿಸಿದೆ.
ಫಲಾನುಭವಿಗಳ ಖಾತೆಗೆ ಇಂದಿನಿಂದ (ಆ.6) ಹಣ ಜಮಾವಣೆ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಜೂನ್ ಮತ್ತು ಜುಲೈ ಎರಡು ತಿಂಗಳ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.