ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಯ ಹಿಂಭಾಗದ ಗುಡ್ಡ ಕುಸಿತ
ಪುತ್ತೂರು: ನಿವೃತ್ತ ಪ್ರಾಂಶುಪಾಲರೋರ್ವರ ಮನೆಯ ಹಿಂಭಾಗದ ಗುಡ್ಡ ಕುಸಿದು ಬಿದ್ದಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಸರ್ವೆ ಗ್ರಾಮದ ಎಲಿಯ ನಿವಾಸಿ, ನಿವೃತ್ತ ಪ್ರಾಂಶುಪಾಲ ಬಿ ವಿ ಸೂರ್ಯನಾರಾಯಣ ಅವರ
ಮನೆಯ ಹಿಂಭಾಗದ ಗುಡ್ಡ ಕುಸಿದು ಮನೆಯ ಗೋಡೆಯವರೆಗೂ ಗುಡ್ಡದ ಮಣ್ಣು ರಾಶಿ ಬಿದ್ದಿದ್ದು ಮನೆಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ
ಮನೆಯ ಹಿಂಭಾಗದಲ್ಲಿ ಬೃಹತ್ ಗುಡ್ಡವಿದ್ದು ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ. ಹಂಚಿನ ಮನೆ ಆದ ಕಾರಣ ಮನೆಮಂದಿ ಹೆಚ್ಚಿನ ಆತಂಕಕ್ಕೆ ಒಳಗಾಗಿದ್ದಾರೆ. ಸದ್ಯಕ್ಕೆ ಟರ್ಪಾಲನ್ನು ಹೊದಿಸಲಾಗಿದೆ