ಕರಾವಳಿಕ್ರೈಂ

ಬೆಳ್ತಂಗಡಿ: ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ

ಬೆಳ್ತಂಗಡಿ: ಗುಡ್ಡ ಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು 5 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದರು.

ಸಾಂದರ್ಭಿಕ ಚಿತ್ರ

ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡೆಪ್ರದೇಶದಲ್ಲಿ ಆ.5ರಂದು ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ, ಧರ್ಮಸ್ಥಳ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಕಿಶೋರ್ ಪಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದು, ಈ ವೇಳೆ ಕೋಳಿ ಅಂಕದಲ್ಲಿ ನಿರತರಾಗಿದ್ದ ದೇವಪ್ಪ, ಉಮ್ಮನ ಗೌಡ, ಪರಮೇಶ್ವರ, ರಾಮಣ್ಣ, ಬಾಲಕೃಷ್ಣ ಮೊದಲಾದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಅವರಿಂದ ನಗದು 5410/- ರೂಪಾಯಿ, 3 ಹುಂಜ ಕೋಳಿ, 2 ಕೋಳಿ ಅಂಕಕ್ಕೆ ಬಳಸುವ ಕತ್ತಿಗಳನ್ನು ಹಾಗೂ ಸ್ಥಳದಲ್ಲಿದ್ದ 4 ದ್ವಿಚಕ್ರ ವಾಹನಗಳನ್ನು ಸ್ವಾಧೀನ ಪಡೆಸಿಕೊಂಡಿದ್ದು ನ್ಯಾಯಾಲಯದಿಂದ ಅನುಮತಿ ಪಡೆದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 58/2024 ಕಲಂ: 87 ಕರ್ನಾಟಕ ಪೊಲೀಸ್‌ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!