ನಿಜವಾಗ್ಲೂ ನವಜೋಡಿ ಹೊಡೆದಾಡಿಕೊಂಡಿದ್ದರೇ..?ಸಾವಿನ ಕುರಿತು ಸಂಶಯ
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ಮದುವೆಯಾದ ಕೆಲವೇ ಗಂಟೆಗಳಲ್ಲಿ ನವ ವಧು ಹಾಗೂ ವರ ಹೊಡೆದಾಡಿಕೊಂಡು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ವ್ಯಕ್ತಿಯ ಕೈವಾಡ ಇರುವ ಬಗ್ಗೆ ವಧು ಲಿಖಿತಶ್ರೀ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಇಬ್ಬರೂ ಬಹಳಷ್ಟು ಅನ್ಯೋನ್ಯವಾಗಿದ್ದವರು, ಪ್ರೀತಿಸಿ ಮದುವೆಯಾಗಿದ್ದವರು. ಇಬ್ಬರು ಪರಸ್ಪರ ಹೊಡೆದಾಡಿಕೊಂಡಿರುವುದು ಅನುಮಾನ ಮೂಡಿಸಿದೆ. ಯಾರೋ ಮೂರನೇ ವ್ಯಕ್ತಿ ಇದರ ಹಿಂದೆ ಇದ್ದಾರೆ ಎಂದು ನವ ವಧು ವರನ ಸಾವಿನ ಬಗ್ಗೆ ಲಿಖಿತಶ್ರೀ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸ್ ತನಿಖೆಯಿಂದಷ್ಟೇ ಸತ್ಯಾಂಶ ಹೊರ ಬರಲಿದೆ.