ಆ.10: ವಯನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಕೇರಳದ ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಆ.10ರಂದು ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಕೇರಳಕ್ಕೆ ತೆರಳಿ ಅಲ್ಲಿಂದ ನೆರೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದು
ಬಳಿಕ ಸಂತ್ರಸ್ತರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
ವಯನಾಡ್ ಜಿಲ್ಲೆಯ ಹಲವಾರು ಸ್ಥಳಗಳಲ್ಲಿ ಭೂಕುಸಿತ, ಪ್ರವಾಹ ಸಂಭವಿಸಿ 350ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಇನ್ನೂ ಹಲವಾರು ಮಂದಿ ನಾಪತ್ತೆಯಾಗಿದ್ದು ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳು ನಡೆಯುತ್ತಲೆ ಇದೆ.