ಆಮ್ ಆದ್ಮಿ ಮುಖಂಡ ಮನೀಶ್ ಸಿಸೋಡಿಯಾಗೆ ಜಾಮೀನು ಮಂಜೂರು
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಕಳೆದ 17 ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಆಮ್ ಆದ್ಮಿ ಪಕ್ಷದ ನಾಯಕ, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ನಲ್ಲಿ ಮಹತ್ವದ ತೀರ್ಪು ಹೊರಬಂದಿದ್ದು ಜಾಮೀನು ಮಂಜೂರಾಗಿದೆ.