ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ಘಟನೆ ನಡೆದಿದ್ದು ಸಚಿನ್ ದಳವಾಯಿ(22ವ) ಹಾಗೂ ಪ್ರಿಯಾ ಮಡಿವಾಳ(19ವ) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಸಚಿನ್ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದರು. ಆದರೆ ಸಚಿನ್ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಸಚಿನ್ ಪ್ರಿಯಾಳಿಗೆ ತಿಳಿಸಿದ್ದಾನೆ. ಇದರಿಂದ ಮನನೊಂದ ಪ್ರೇಮಿಗಳು ಗುರುವಾರ ರಾತ್ರಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.