ಚೆಸ್ ಸ್ಪರ್ಧೆ: ಈಡನ್ ಗ್ಲೋಬಲ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಪುತ್ತೂರು: ಕುಂಬ್ರ ಕೆ.ಪಿ.ಎಸ್ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಬೆಳಂದೂರು ಈಡನ್ ಗ್ಲೋಬಲ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೂನಿಯರ್ ವಿಭಾಗದಲ್ಲಿ ಏಳನೇ ತರಗತಿಯ ವಿದ್ಯಾರ್ಥಿ ಆಶಿರ್ ಅಬ್ದುಲ್ಲಾ ಪ್ರಥಮ ಸ್ಥಾನ ಹಾಗೂ ಸೀನಿಯರ್ ವಿಭಾಗದಲ್ಲಿ ಹುಸನ್ ನಿಶಾನುಲ್ ಹನೀಫ್ ಐದನೇ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶ್ರೀಮತಿ ಶ್ವೇತಾ ಕುಮಾರಿ ತರಬೇತುದಾರರಾಗಿದ್ದಾರೆ.