ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಇಬ್ಬರು ಮಕ್ಕಳನ್ನು ಬಾವಿಗೆ ದೂಡಿ ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ನಡೆದಿದೆ.
ಚಂಪಾಕಪುರ ನಿವಾಸಿ ವಾಣಿ (32) ಮತ್ತು ಮಕ್ಕಳಾದ ಸಮರ್ಥ (12), ಸಂಪದ (6) ಮೃತರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.