15 ಬಜೆಟ್ ಮಂಡಿಸಿದ್ದೇನೆ. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು
ನಾನು 15 ಬಜೆಟ್ ಮಂಡಿಸಿದ್ದೇನೆ. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ, ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ .
ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ, ವಿಜಯೇಂದ್ರ, ಆರ್ ಅಶೋಕ ಸೇರಿದ್ದಾರೆ.
ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮದ್ರೋಹ ಅಲ್ಲವೇ? ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.