ಜಿಲ್ಲೆರಾಜ್ಯ

ಮತ್ತೆ ಗುಡ್ಡ ಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ



ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ
ಬಾಳ್ಳುಪೇಟೆ ಸಮೀಪ ನಡೆದಿದ್ದು ಇದರಿಂದ ಬೆಂಗಳೂರು-ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ.



ಆಗಸ್ಟ್ 9ರಂದು ಮಧ್ಯರಾತ್ರಿ ಈ ಘಟನೆ ನಡೆದಿದ್ದು ಬೆಂಗಳೂರು -ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ.

ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಆರು ಕಡೆ ಆರು ರೈಲುಗಳು ನಿಂತಿವೆ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ರೈಲುಗಳಲ್ಲಿ ಸಾವಿರಾರು ಪ್ರಯಾಣಿಕರು ಇದ್ದು ಪರ್ಯಾಯ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!