ಬ್ರೆಜಿಲ್’ನಲ್ಲಿ ವಿಮಾನ ಪತನ: 62 ಮಂದಿ ಮೃತ್ಯು
ಬ್ರೆಜಿಲ್ ನಲ್ಲಿ ವಿಮಾನ ಅಪಘಾತ ಸಂಭವಿಸಿದ್ದು ವಿಮಾನದಲ್ಲಿದ್ದ 62 ಜನರು ಕೂಡ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಏರ್ಲೈನ್ ವೊಪಾಸ್ ಲಿನ್ಹಾಸ್ ಏರಿಯಾಸ್ ನಿರ್ವಹಿಸುತ್ತಿದ್ದ ATR-72 ಟರ್ಬೊಪ್ರೊಪ್ ವಿಮಾನವು ಪರಾನಾ ರಾಜ್ಯದ ಕ್ಯಾಸ್ಕಾವೆಲ್ನಿಂದ ಸಾವೊ ಪಾಲೊದಲ್ಲಿನ ಗೌರುಲ್ಹೋಸ್ಗೆ ತೆರಳುತ್ತಿದ್ದಾಗ, ಮಾರ್ಗ ಮಧ್ಯೆ ಸಾವೊ ಪಾಲೊ ನಗರದ ಜನವಸತಿ ಪ್ರದೇಶದಲ್ಲಿ ಪತನಗೊಂಡಿದೆ.

58 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ದು ಸಾವೊ ಪಾಲೊದ ಗೌರುಲ್ಹೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವಿಮಾನ ಅಪಘಾತಕ್ಕೀಡಾಗಿದೆ. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ.