ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ
ಭಾರೀ ಭೂಕುಸಿತ ಉಂಟಾಗಿ ದುರಂತ ಸಂಭವಿಸಿರುವ ಕೇರಳದ ವಯನಾಡಿಗೆ ಇಂದು(ಆ.10) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದುರಂತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಕಣ್ಣೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡ್ ತಲುಪಿದ್ದು ಬಳಿಕ ಭೂಕುಸಿತ ಸಂಭವಿಸಿದ ಮುಂಡಕೈ- ಚೂರಲ್ಮಲ-ಪುಂಚಿರಿಮಟ್ಟಂ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು ಎಂದು ತಿಳಿದು ಬಂದಿದೆ.
ಪ್ರಧಾನಮಂತ್ರಿಯವರೊಂದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರ ಸಚಿವ ಸುರೇಶ್ ಗೋಪಿ, ಜಿಲ್ಲಾಧಿಕಾರಿ ಅರುಣ್ ಮತ್ತಿತರರು ಉಪಸ್ಥಿತರಿದ್ದರು.