ಅರಂತೋಡು: ಮಾನಸಿಕ ಅಸ್ವಸ್ಥ ವ್ಯಕ್ತಿಯಿಂದ ಸಾರ್ವಜನಿಕರಿಗೆ, ವಾಹನಗಳಿಗೆ ಕಲ್ಲೆಸೆತ
ಸುಳ್ಯ: ಅರಂತೋಡು ಮುಖ್ಯಪೇಟೆಯಲ್ಲಿ ಸಂಚರಿಸುತ್ತಿದ್ದ ವಾಹನಗಳಿಗೆ ಹಾಗೂ ಸಾರ್ವಜನಿಕರಿಗೆ ಕಲ್ಲೆಸೆಯುತ್ತಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಸಾರ್ವಜನಿಕರು ಗೂನಡ್ಕ ಬಳಿ ತಡೆದು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ನಡೆದಿದೆ.
ಸುಳ್ಯದಿಂದ ನಡೆದುಕೊಂಡು ಬಂದ ಮಾನಸಿಕ ಅಸ್ವಸ್ಥ ವ್ಯಕ್ತಿ ಅರಂತೋಡು ಪೇಟೆಯಲ್ಲಿ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಮತ್ತು ವಾಹನಗಳಿಗೆ ಕಲ್ಲೆಸೆದಿದ್ದು ಆತಂಕಕ್ಕೆ ಕಾರಣವಾಗಿತ್ತು. ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಬಂದ ಕಲ್ಲುಗುಂಡಿ ಹೊರ ಠಾಣಾ ಪೊಲೀಸರು ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ .