ಕ್ರೈಂರಾಷ್ಟ್ರೀಯ

ಕೋಲ್ಕತ್ತಾ: ಕಿರಿಯ ವೈದ್ಯೆ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣ ಸಿಬಿಐ ಗೆ ಮಮತಾ ಬ್ಯಾನರ್ಜಿ



ಕೋಲ್ಕತ್ತಾದ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವಿದ್ಯಾರ್ಥಿನಿ, ಕಿರಿಯ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಂಗಾಳ ಪೊಲೀಸರಿಗೆ ಗಡುವು ನೀಡಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿರುವ ಅವರು ಭಾನುವಾರದೊಳಗೆ ಪ್ರಕರಣವನ್ನು ಭೇದಿಸಲು ಪೊಲೀಸರಿಗೆ ಸಾಧ್ಯವಾಗದಿದ್ದರೆ, ನಾವು ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುತ್ತೇವೆ ಎಂದಿದ್ದಾರೆ ಎಂದು ತಿಳಿದು ಬಂದಿದೆ.

ಕೋಲ್ಕತ್ತಾ ಪೊಲೀಸ್ ಕಮಿಷನರ್ ಅವರಿಂದ ಘಟನೆಯ ಬಗ್ಗೆ ನನಗೆ ತಿಳಿದಾಗ, ತಕ್ಷಣ ಮತ್ತು ಕ್ಷಿಪ್ರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!