ವಿನೇಶ್ ಫೋಗಟ್ ಅನರ್ಹ ಪ್ರಕರಣ: ತೀರ್ಪು ಮತ್ತೆ ಮುಂದೂಡಿಕೆ
ನವದೆಹಲಿ: ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರ ಅನರ್ಹ ಪ್ರಕರಣಕ್ಕೆ ಸಂಬಂಧಪಟ್ಟ ತೀರ್ಪನ್ನು ಮಧ್ಯಸ್ಥಿಕೆ ನ್ಯಾಯಾಲಯ (ಸಿಎಎಸ್) ಮತ್ತೆ ಮುಂದೂಡಿದ್ದು 16ರ ವರೆಗೆ ಕಾದಿರಿಸಿದೆ ಎಂದು ಐಒಎ ತಿಳಿಸಿದೆ.
ತನಗೆ ಜಂಟಿ ಬೆಳ್ಳಿ ಪದಕ ನೀಡುವಂತೆ ವಿನೇಶ್ ಫೋಗಾಟ್ ಅರ್ಜಿ ಸಲ್ಲಿಸಿದ್ದಾರೆ. ಮಂಗಳವಾರ ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ತೀರ್ಪಿಗಾಗಿ ಕಾಯುತ್ತಿದ್ದಾರೆ.