ವಯನಾಡ್ ಭೂಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಕೇರಳ ಸಿಎಂ
ವಯನಾಡ್ ಭೂಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಲಾ ಆರು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ವಯನಾಡ್ ಭೂಕುಸಿತದಿಂದಾಗಿ ಕನಿಷ್ಠ 400ಕ್ಕೂ ಅಧಿಕ ಜನರು ಮೃತಪಟ್ಟಿದ್ದರು. 4 ಲಕ್ಷ ರೂ.ಗಳಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮತ್ತು ಉಳಿದ 2 ಲಕ್ಷ ರೂ.ಗಳನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ ನೀಡಲಾಗುತ್ತದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.
ಭೂಕುಸಿತದಲ್ಲಿ ಕಣ್ಣು ಮತ್ತು ಕೈಕಾಲುಗಳನ್ನು ಕಳೆದುಕೊಂಡ ಅಥವಾ ಶೇ.60 ರಷ್ಟು ಅಂಗವೈಕಲ್ಯಕ್ಕೆ ಒಳಗಾದವರಿಗೆ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ 75,000 ರೂಪಾಯಿಗಳನ್ನು ನೀಡಲಾಗುವುದು ಎಂದು ಅವರು ಪಿಣರಾಯಿ ವಿಜಯನ್ ತಿಳಿಸಿದ್ದಾರೆ.