ಕುಸ್ತಿಪಟು ವಿನೇಶ್ ಫೋಗಟ್ ಗೆ ಭಾರೀ ನಿರಾಸೆ: ಮೇಲ್ಮನವಿ ಅರ್ಜಿ ವಜಾ
ಪ್ಯಾರಿಸ್ ಒಲಿಂಪಿಕ್ಸ್ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದ ಫೈನಲ್ ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದರ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಅರ್ಜಿಯನ್ನು ವಜಾ ಮಾಡಿದೆ.
ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಪ್ರಕರಣವನ್ನು ಆಲಿಸಿದ ಸಿಎಎಸ್ ತನ್ನ ನಿರ್ಧಾರವನ್ನು ಆ.16ಕ್ಕೆ ಮುಂದೂಡಿತ್ತು. ಇಂದು ನಿರ್ಧಾರ ಪ್ರಕಟಿಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿರುವುದಾಗಿ ಹೇಳಿದೆ