ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ: ಆಕ್ರೋಶ ವ್ಯಕ್ತಪಡಿಸಿದ ರಾಹುಲ್ ಗಾಂಧಿ
ದೆಹಲಿ: ಕೋಲ್ಕತ್ತಾದಲ್ಲಿ ಕಿರಿಯ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದು, ದೇಶಾದ್ಯಂತ ವೈದ್ಯಕೀಯ ಸಮುದಾಯ ಮತ್ತು ಮಹಿಳೆಯರಲ್ಲಿ ಅಭದ್ರತೆ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.
ಶಿಕ್ಷಣ ಮತ್ತು ವೈದ್ಯಕೀಯ ಸಂಸ್ಥೆಗಳಲ್ಲಿನ ಸುರಕ್ಷತಾ ಕ್ರಮಗಳನ್ನು ಪ್ರಶ್ನಿಸಿದರು.
ಕೋಲ್ಕತ್ತಾದಲ್ಲಿ ಕಿರಿಯ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಭೀಕರ ಘಟನೆಯಿಂದ ಇಡೀ ದೇಶವೇ ಬೆಚ್ಚಿಬಿದ್ದಿದೆ. ಆಕೆಯ ವಿರುದ್ಧದ ಕ್ರೂರ ಮತ್ತು ಅಮಾನವೀಯ ಕೃತ್ಯದ ಬಳಿಕ ವೈದ್ಯ ಸಮುದಾಯ ಮತ್ತು ಮಹಿಳೆಯರಲ್ಲಿ ಅಭದ್ರತೆಯ ವಾತಾವರಣವಿದೆ ಎಂದು ಹೇಳಿದ್ದಾರೆ.