ಈಡನ್ ಗ್ಲೋಬಲ್ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನ ಆಚರಣೆ
ಪುತ್ತೂರು: ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ 78ನೇ ಸ್ವಾತ್ರಂತ್ರ್ಯ ದಿನವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಾರ್ಥನೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ವಿದ್ಯಾರ್ಥಿ ನಾಯಕಿ ರಿಫಾ ಫಾತಿಮಾ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಸಂಸ್ಥೆಯ ಅಧ್ಯಕ್ಷರಾದ ಪುತ್ತು ಬಾವ ಹಾಜಿ ಧ್ವಜಾರೋಹಣ ನೆರವೇರಿಸಿ ಅಧ್ಯಕ್ಷೀಯ ಭಾಷಣ ಮಾಡಿದರು.ಶಾಲಾ ಪ್ರಾಂಶುಪಾಲರಾದ ರಂಝೀ ಮುಹಮ್ಮದ್ ಸ್ವಾತಂತ್ರ್ಯ ದಿನದ ಸಂದೇಶವನ್ನು ನೀಡಿದದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ಸೈನಿಕರಾದ ರಾಮಕೃಷ್ಣ ಎಂ ಸ್ವಾತಂತ್ರ್ಯ ದಿನವನ್ನು ಉದ್ದೇಶಿಸಿ ಮಾತನಾಡಿ ಸೇನೆಯಲ್ಲಿನ ತಮ್ಮ ಅನುಭವವನ್ನು ಹಂಚಿಕೊಳ್ಳುವ ಮೂಲಕ ಮಕ್ಕಳಿಗೆ ದೇಶ ಸೇವೆ ಮಾಡಲು ಉತ್ತೇಜಿಸಿದರು. ಕಾರ್ಯಕ್ರಮದಲ್ಲಿ ಅವರ ದೇಶ ಸೇವೆಗಾಗಿ ಸಂಸ್ಥೆಯ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ನಂತರ ಸ್ವಾತಂತ್ರ್ಯ ದಿನದ ಅಂಗವಾಗಿ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಅಬ್ಬಾಸ್ ಹಾಜಿ ನೆಕ್ಕರೆ ಬಹುಮಾನ ವಿತರಿಸಿದರು. ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಮಕ್ಕಳು ತಮ್ಮ ಹಾಡು, ಭಾಷಣ ಹಾಗೂ ನೃತ್ಯದ ಮೂಲಕ ತಮ್ಮ ದೇಶ ಪ್ರೇಮವನ್ನು ತೋರ್ಪಡಿಸಿದರು.
ಕಿಂಡರ್ ಗಾರ್ಡನ್ ಮಕ್ಕಳು ಸ್ವಾತಂತ್ರ್ಯ ಸೇನಾನಿಗಳ ವೇಷಭೂಷಣ ಧರಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು,ಪೋಷಕರು ಹಾಗೂ ಶಾಲಾ ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಮಾರಿ ಅಮ್ನಾ ಫಾತಿಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಅಮೃತಾ ನಾಯ್ಕ್ ವಂದಿಸಿದರು.