ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ಪಿತೂರಿಯಾಗಿದ್ದು ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ರಾಜ್ಯಪಾಲರ ಮೇಲೆ ನಂಬಿಕೆ ಇತ್ತು. ಸಾಂವಿಧಾನಿಕ ಸ್ಥಾನದಲ್ಲಿ ಕುಳಿತ, ಸಂವಿಧಾನ ಎತ್ತಿ ಹಿಡಯಬೇಕಾದ ರಾಜ್ಯಪಾಲರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯೇತರ ರಾಜ್ಯಗಳಿಗೆ ಬಿಜೆಪಿಯವರು ತೊಂದರೆ ಕೊಡುತ್ತಿದ್ದಾರೆ. ಬಿಜೆಪಿ ಇಲ್ಲದ ರಾಜ್ಯಗಳಲ್ಲಿ ಇಡಿ, ಐಟಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದರು.