ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಮುಡಾ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕಾರಣ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರ ಪ್ರತಿಯನ್ನು ಲಗತ್ತಿಸಿ ಪೋಸ್ಟ್ ಮಾಡಿರುವ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ರಾಜೀನಾಮೆ ನೀಡುವ ಮೂಲಕ ಕಚೇರಿಯ ಘನತೆ ಕಾಪಾಡಬೇಕು ಎಂದು ಅವರು ಹೇಳಿದ್ದಾರೆ.