ಇಂದು ಸಿದ್ದರಾಮಯ್ಯ ಪರ ವಕೀಲರಿಂದ ಹೈಕೋರ್ಟ್‌ಗೆ ರಿಟ್ ಅರ್ಜಿ
ಬೆಂಗಳೂರು: ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಸಚಿವರು, ಆಪ್ತರು ಮತ್ತು ವಕೀಲರ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಆ.19ರಂದು ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ನೇರವಾಗಿ ಸುಪ್ರೀಂ ಮೊರೆ ಹೋದರೆ ಪ್ರಕರಣ ಹೈಕೋರ್ಟ್‌ಗೆ ವರ್ಗಾವಣೆಯಾಗಬಹುದು ಎಂದು ವಕೀಲರು ಸಲಹೆ ನೀಡಿದ್ದಾರೆ ಎನ್ನಲಾಗಿದ್ದು ಹೀಗಾಗಿ ಹೈಕೋರ್ಟ್‌ನಲ್ಲೇ ರಿಟ್ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.