ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ
ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಆ.19ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆದಿದೆ. ಮಂಗಳೂರಿನ ಲಾಲ್ ಭಾಗ್ ಜಂಕ್ಷನ್ ಬಳಿ ಘಟನೆ ನಡೆದಿದೆ.
![](https://newsbites.in/wp-content/uploads/2024/08/img_20240819_1314102168363052575363360.jpg)
ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲು ಎಸೆದಿದ್ದಾರೆ ಎನ್ನಲಾಗಿದೆ. ಪರಿಣಾಮ ಬಸ್ ನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.