ಮಂಗಳೂರು: ಬಸ್ಸಿಗೆ ಕಲ್ಲೆಸೆದ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು: ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ನಡೆಸಿದ ಪ್ರತಿಭಟನೆ ವೇಳೆ ಬಸ್‌ಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಶಾಹುಲ್ ಹಮೀದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಬಂಧಿತ ಆರೋಪಿಗಳು. ಬಸ್‌ಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ಬಸ್ಸಿನ ಮುಂಭಾಗದ ಗಾಜು ಒಡೆದು ಹೋಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.