ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನ್ನ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನೆ ಮಾಡಿ ಸಿಎಂ ಸಿದ್ದರಾಮಯ್ಯ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ವಿಚಾರಣೆಯನ್ನು ಆಗಸ್ಟ್ 29 ಕ್ಕೆ ಮುಂದೂಡಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯರವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.