ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ
ಪುತ್ತೂರು ವಿದ್ಯಾರ್ಥಿನಿಗೆ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದ ಘಟನೆ ಆ.20ರಂದು ನಡೆದಿದೆ.
ಪುತ್ತೂರು ಕೊಂಬೆಟ್ಟು ಸರಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಗೆ, ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಓರ್ವ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.